ಕಾರವಾರ: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಸಾವನ್ನಪ್ಪಿದ್ದರು. ಆರ್ಥಿಕವಾಗಿ ಗಟ್ಟಿಯಾಗಿಯೇ ಇದ್ದ ಪಿಕಳೆ, ಒಂಟಿಯಾಗಿ ವಾಸಿಸುತ್ತಿದ್ದರು. ಪಿಕಳೆ ಕುಟುಂಬ ಕಾರವಾರದಲ್ಲಿ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಕೆಲ ದಿನಗಳ ಹಿಂದೆ ರಾಜೀವ್ ಪಿಕಳೆ ರೋಗಿಗೆ ಅವಧಿ ಮುಗಿದಿರುವ ಮಾತ್ರೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರಿಂದ ಮನನೊಂದ ಪಿಕಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಸುಭಾಷ್, ಹರಿಶ್ಚಂದ್ರ ಎನ್ನುವವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿರುವ ಇವರನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.
ವೈದ್ಯ ಆತ್ಮಹತ್ಯೆ ಪ್ರಕರಣ ವೀಡಿಯೋ ವೈರಲ್ ಮಾಡಿದ್ದ ಇಬ್ಬರು ಸೆರೆ



