ಬೆಂಗಳೂರು: ಚುನಾವಣೆ ಯಲ್ಲಿ ಜನ ತಮ್ಮ ಆಶೀ ರ್ವಾದದಿಂದ ಅಭ್ಯರ್ಥಿಯ ಗೆಲುವು ನಿರ್ಧರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‍ನ ಹಿರಿಯ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಚುನಾವಣೆ ಘೋಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಾವು ಪಕ್ಷ ನಿರ್ಧಾರ ಮಾಡಿರುವಂತೆ ವರುಣಾ ಕ್ಷೇತ್ರದಲ್ಲೇ ಸ್ಪರ್ಧಿಸುವುದಾಗಿ ತಿಳಿಸಿದರು.
ತಮ್ಮ ಹುಟ್ಟೂರಾದ ಸಿದ್ದರಾಮನ ಹುಂಡಿ ವರುಣಾ ಕ್ಷೇತ್ರಕ್ಕೆ ಬರುವುದರಿಂದ ಆ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುತ್ತಿದ್ದು, ಇದು ನನ್ನ ಕೊನೆ ಚುನಾವಣೆ ನನ್ನ ಎದುರಾಳಿ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ಜನ ಗೆಲುವಿನ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ ಅವರು, ಈ ಭಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
Leave a Review