ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೇತನ್ (20) ಮೃತ ವ್ಯಕ್ತಿ ಯಾಗಿದ್ದು, ಇವರು ಖಾಸಗಿ ಕಾಲೇಜಿನ ವ್ಯಾನ್ ಮ್ಯಾನೇಜ್ಮೆಂಟ್ ಕೆಲಸ ಮಾಡಿಕೊಂಡಿದ್ದರು. ಮನೆ ಬಿಟ್ಟು ಹೋಗುತ್ತೇನೆ ಇಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತನಿಗೆ ಮೆಸೇಜ್ ಮಾಡಿ ಬಳಿಕ ಚೇತನ್ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಬAಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.



