ಬೆಂಗಳೂರು : ಇತ್ತೀಚಿಗೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವತಿ ಒಬ್ಬಳು ಯುವಕನನ್ನು ಪರಿಚಯಿಸಿಕೊಂಡಿದ್ದಾಳೆ. ಬಳಿಕ ಯುವಕನನ್ನು ಲಾಡ್ಜ್ ಗೆ ಕರೆದು ಇದು ಯುವಕನ ೫೮ ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್?ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ೫೮ ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದ ಯುವಕ.
ಪೀಣ್ಯದ ನಾಗಸಂದ್ರದ ಪಿಜಿ ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್?ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.೧ರಂದು ಇಂದಿರಾನಗರದ ರೆಸ್ಟೋರೆಂಟ್ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದಾರೆ.
ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್?ವೊಂದರಲ್ಲಿ ರೂಮ್ ಬುಕ್ ಮಾಡಿದಳು. ಆನ್ಲೈನ್?ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, ೧೦ ಸಾವಿರ ನಗದು ಸೇರಿದಂತೆ ಒಟ್ಟು ೬.೮೦ ಲಕ್ಷ ರೂ ಮೌಲ್ಯದ ೫೮ ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.



