ಕಲಬುರಗಿ: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಸ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿಯಿದ್ದಾರೆ. ಈಗ ಆ ಪ್ರಶ್ನೆ ಉದ್ಭವಿಸುವುದಿಲ್ಲ. ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ತಿಳಿಸಿದ್ದಾರೆ.
ಅಂತಹ ಪ್ರಶ್ನೆ ಬಂದಾಗ ರಾಹುಲ್ಗಾಂಧಿ, ಸೋನಿಯಾಗಾಂಧಿ ನಾವು ಚರ್ಚಿಸುತ್ತೇವೆ. ಆದಷ್ಟೂ ಬೇಗ ಗೊಂದಲ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ. ಖರ್ಗೆ ಅವರು ಮುಖ್ಯಮಂತ್ರಿಯಾದರೆ ಸಂತೋಷ ಎಂದು ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಮಾತನ್ನು ಅವರು ಹೇಳುತ್ತಾರೆ, ನೀವು ಹೇಳುತ್ತೀರಿ, ಮೇಲಿನವರು ಹೇಳುತ್ತಾರೆ. ಆದರೆ ಹಣೆ ಬರಹ ಎಂದು ಹೇಳುವ ಬದಲು ಪಕ್ಷಕ್ಕಾಗಿ ದುಡಿದಿದ್ದೇವೆ. ಇಂತಹ ನಿರ್ಣಯಗಳನ್ನು ಪಕ್ಷದಲ್ಲಿ ಸೋನಿಯಗಾಂಧಿ ಅವರೇ ನಿರ್ಧರಿಸುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಒಟ್ಟಾರೆ ಕಳೆದ 3-4 ತಿಂಗಳಿನಿಂದ ಕಾಂಗ್ರೆಸ್ ಪಕ್ಷದಲ್ಲಿ ಕೇಳಿ ಬರುತ್ತಿದ್ದ ನಾಯಕತ್ವ ಬದಲಾವಣೆ ವಿಷಯ ಇದೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಸದ್ಯಕ್ಕೆ ಆತುರದ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ಸದ್ಯಕ್ಕೆ ಸಿಎಂ ಬದಲಾವಣೆಯಿಲ್ಲ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ



