ಬೆಂಗಳೂರು: ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ಆದೇಶ ಹೊರಡಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿನಿತ್ಯ 15 ದಿನಗಳ ಕಾಲ 3500 ಕ್ಯೂಸೆಕ್ಸ್ ನೀರು ಬಿಡುವ ಕ್ರಮವನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕುವೆಂಪು ಪ್ರತಿಮೆ ಬಳಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಒಂದೂ ಹನಿ ನೀರನ್ನು ಬಿಡುವುದು ಬೇಡ ಎಂದು ಆಗ್ರಹಪಡಿಸಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಹೋರಾಟಗಾರರಾದ ಸಾ.ರಾ.ಗೋವಿಂದು ಮತ್ತು ಕಾರ್ಯಕರ್ತರು ರಕ್ತಕೊಟ್ಟೆವು, ನೀರು ಕೊಡೆವು ನಮಗೆ ನೀರು ಇಲ್ಲದಿರುವಾಗ ಅವರಿಗೆ ನೀರು ಬಿಡುವುದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿ ರಸ್ತೆ ನಡೆಸಲು ಮುಂದಾದಾಗ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು. ಕನ್ನಡ ಸಂಘಟನೆಗಳ ಮುಖಂಡರಾದ ವಾಟಾಳ್ ನಾಗರಾಜ್, ಟಿ.ಎ. ನಾರಾಯಣಗೌಡ, ಪ್ರವೀಣ್ಶೆಟ್ಟಿ, ಕೆ.ಆರ್. ಕಿರಣ್ಕುಮಾರ್ ಮಾತನಾಡಿ, ಕಾವೇರಿ ನೀರು ಬಿಡುವ ಆದೇಶಕ್ಕೆ ವ್ಯಾಪಕ ಖಂಡನೆ ವ್ಯಕ್ತಪಡಿಸಿದರು. ಮಂಡ್ಯದಲ್ಲೂ ಸಹ ರೈತ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಮತ್ತಿತರರು ಮಾತನಾಡಿ, ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದು ಹಂತದಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು, ತಮಿಳುನಾಡಿನಲ್ಲಿ ಕಾವೇರಿ ನೀರು ಹೆಚ್ಚಾಗಿ ಸಮುದ್ರಕ್ಕೆ ಹೋಗುತ್ತಿರುವುದನ್ನು ವಿಡೀಯೋ ಸಮೇತ ಸೆರೆ ಹಿಡಿದು ಅಲ್ಲಿ ಇಂತಹ ಪರಿಸ್ಥಿತಿ ಇರುವಾಗ ಮತ್ತೆ ನೀರು ಬಿಡುವಂತೆ ಆದೇಶಿಸಿರುವುದು ಸರಿಯಲ್ಲ ಎಂದು ಈ ಕ್ರಮವನ್ನು ನಾವು ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ನೀರು ಬಿಡದೆ ಇರಲು ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿಂದೆಯೂ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಮತ್ತು ಬಂಗಾರಪ್ಪ ಅವರು ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಕಾವೇರಿ ನೀರಿನ ಸಂಬಂಧ ತೀವ್ರ ಪ್ರತಿಭಟನೆ ಹೆಚ್ಚಾಗಿತ್ತು. ದೇವೇಗೌಡರು ತಮ್ಮ ಅಧಿಕಾರಾವಧಿಯಲ್ಲಿ ಇಂತಹ ಪರಿಸ್ಥಿತಿಯನ್ನು ಬಹಳ ನಾಜೂಕಾಗಿ ನಿಭಾಯಿಸಿದ್ದರು.
ಬರ ಅಧ್ಯಯನಕ್ಕಾಗಿ ಚಿತ್ರದುರ್ಗ ಜಿಲ್ಲೆಗೆ ಪ್ರವಾಸಕ್ಕೆ ತೆರಳಿರುವ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಇಂತಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಆದಷ್ಟೂ ಶೀಘ್ರ ಬಗೆಹರಿಸಬೇಕು ಕೇಂದ್ರದತ್ತ ಕೈ ತೋರಿಸಿ ಸುಮ್ಮನಿರಬಹುದು. ತಾವು ಮಂತ್ರಿಯಾಗಿದ್ದ ಇಂತಹ ಪರಿಸ್ಥಿತಿಯನ್ನು ಒಂದು ತಿಂಗಳೊಳಗಾಗಿ ನಿಭಾಯಿಸಿದ್ದಾಗಿ ಹೇಳಿದ್ದಾರೆ.
ಕಾವೇರಿ ದಳ್ಳೂರಿ ತಮಿಳುನಾಡಿಗೆ ನೀರು ಬಿಡುವ ಆದೇಶಕ್ಕೆ ವ್ಯಾಪಕ ಆಕ್ರೋಶ



