2015 ರಿಂದ 2019ರ ನಡುವೆ ಹುಲಿಯೂರು ದುರ್ಗ ಸುತ್ತಮುತ್ತ ಹಲವಾರು ಮಕ್ಕಳು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪುವ ನೈಜ ಘಟನೆಯನ್ನು ಇಟ್ಟುಕೊಂಡು ತಯಾರಾದ ಹಾರರ್, ಥ್ರಿಲ್ಲರ್ ಚಿತ್ರ ಡಿಸೆಂಬರ್ 24 ಈ ಶುಕ್ರವಾರ ರಿಲೀಸಾಗುತ್ತಿದೆ. ಚಿತ್ರದಲ್ಲಿ ಭಾಗ್ಯಲಕ್ಷ್ಮಿ ಖ್ಯಾತಿಯ ಭೂಮಿಕಾ ರಮೇಶ್, ಅಪ್ಪು ಬಡಿಗೇರ್ ನಾಯಕ, ನಾಯಕಿಯಾಗಿ ನಟಿಸಿದ್ದು, ಫೆ.10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಫ್ರೆಂಡ್‍ಷಿಪ್‍ಗೆ ಹೆಚ್ಚು ಪ್ರಾಮುಖ್ಯತೆ ಇರುವ ಕಥೆ ಚಿತ್ರದಲ್ಲಿದ್ದು, ತಮ್ಮ ಸ್ನೇಹಿತನ ಮನೆಯಲ್ಲಿ ನಡೆದ ಘಟನೆಯಿಂದ ಸ್ನೇಹಿತರೆಲ್ಲ ಸೇರಿ ಅದಕ್ಕೆ ಮೆಡಿಸಿನ್ ಹುಡುಕಿಕೊಂಡು ಕಾಡಿಗೆ ಹೋಗುತ್ತಾರೆ. ಆಗ ಅಲ್ಲಿ ನಡೆಯುವ ಘಟನೆಗಳೇ ಚಿತ್ರದ ಮುಖ್ಯ ಕಥಾವಸ್ತು. ಬೆಂಗಳೂರು, ಸಕಲೇಶಪುರ, ಹುಲಿಯೂರು ದುರ್ಗ ಹಾಗೂ ದಾಂಡೇಲಿ ಫಾರೆಸ್ಟ್ ಸುತ್ತಮುತ್ತ ಸುಮಾರು 60 ದಿನ ಚಿತ್ರೀಕರಣ ನಡೆಸಲಾಗಿದೆ.
ರಘು ಎಸ್. ನಿರ್ಮಾಣದ ಈ ಚಿತ್ರಕ್ಕೆ ಮಂಜು ಡಿ.ಟಿ., ಸಿದ್ದಮ್ಮ ಕಂಬಾರ್, ಮಹಂತೇಶ್ ನೀಲಪ್ಪ ಚೌಹಾಣ್ ಹಾಗೂ ವಿ.ಬೆಟ್ಟೇಗೌಡ ಅವರ ಸಹ ನಿರ್ಮಾಣವಿದೆ.
ಚಿತ್ರದ 4 ಹಾಡುಗಳಿಗೆ ಪ್ರವೀಣ್ ನಿಕೇತನ್ ಹಾಗೂ ವಿಶಾಲ್ ಆಲಾಪ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ. ವಿ.ನಾಗೇಂದ್ರಪ್ರಸಾದ್, ವಿಶಾಲ್ ಆಲಾಪ್ ಹಾಗೂ ಗೀತಾ ಆನಂದ್ ಪಟೇಲ್ ಸಾಹಿತ್ಯ ಬರೆದಿದ್ದಾರೆ. ವಿನಯ್ ಗೌಡ ಕ್ಯಾಮೆರಾವರ್ಕ್ ಮಾಡಿದ್ದಾರೆ.
ರವಿ ಕೆ.ಆರ್.ಪೇಟೆ, ರಘು ಶೆಟ್ಟಿ, ಜಗದೀಶ್ ಹೆಚ್. ದೊಡ್ಡಿ, ಸಾಗರ್ ಐವರು ಸ್ನೇಹಿತರಾಗಿ ನಟಿಸಿದ್ದಾರೆ. ದಿವ್ಯ ಆಚಾರ್, ಆನಂದ್ ಪಟೇಲ್ ಹುಲಿಕಟ್ಟೆ, ಅನಿಲ್ ಗೌಡ್ರು ಉಳಿದ ಪಾತ್ರಗಳಲ್ಲಿದ್ದಾರೆ.
Leave a Review