ಬೆಂಗಳೂರು : ರಾಜ್ಯದಲ್ಲಿ ಖSS ಚಟುವಟಿಕೆಗಳಿಗೆ ನಿಷೇಧದ ಕುರಿತು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿವೆ.
ಈ ಸಂಬAಧ ಎಕ್ಸ್ನಲ್ಲಿ ಮಾಹಿತಿ ಹಂಚಿಕೊAಡಿರುವ ಅವರು, ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಪ್ರಶ್ನಿಸಲು ಧೈರ್ಯ ಮಾಡಿದರಿಂದ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆಗಳು ಹಾಗೂ ನಿಂದನೆ ಕರೆಗಳು ಬರುತ್ತಿದ್ದು, ಆದರೆ ನಾನು ಇದು ಯಾವುದಕ್ಕೂ ವಿಚಲಿತನಾಗುವುದಿಲ್ಲ.
ಅಥವಾ ಆಶ್ಚರ್ಯ ಪಡುವುದಿಲ್ಲ ಆರ್ ಎಸ್ ಎಸ್ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ಇನ್ನು ಅವರು ನನ್ನನ್ನು ಏಕೆ ಬಿಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಮಾನತೆ ವಿವೇಚನೆ ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್ ಗಳಿಂದ ಶುದ್ಧೀಕರಿಸಬೇಕಿದೆ ಎಂದು ಎಕ್ಸ÷್ಕತೆಯಲ್ಲಿ ಸಚಿವ ಪ್ರಿಯಾಂಕರಿಗೆ ಮಾಹಿತಿ ಹಂಚಿಕೊAಡಿದ್ದಾರೆ.



