ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಪ್ರತ್ಯೇಕ ಕಡೆಗಳಲ್ಲಿ ನಡೆದ ಎರಡು ಪ್ರಮುಖ ದಾಳಿಗಳಲ್ಲಿ ಒಟ್ಟು 2 ಕೋಟಿ 90 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರು ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ.ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ ಮೊದಲ ಪ್ರಕರಣದಲ್ಲಿ, ನಗರದ ಹೆಬ್ಬಾಳ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಹೈಡ್ರೋ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಪ್ರಮುಖ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 2.20 ಕೋಟಿ ರೂಪಾಯಿ ಮೌಲ್ಯದ ಸುಮಾರು 3 ಕೆಜಿ 180 ಗ್ರಾಂ ತೂಕದ ಅತ್ಯಂತ ದುಬಾರಿ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ಮಹಾರಾಷ್ಟ್ರದಿಂದ ಹರಿದು ಬರುತ್ತಿತ್ತು ಮಾದಕ ದ್ರವ್ಯ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಆರೋಪಿ ಇಮ್ರಾನ್ ಪಾಷಾ ತನಗೆ ಬೇಕಾದ ಡ್ರಗ್ಸ್ ನೆಟ್ವರ್ಕ್ ಅನ್ನು ಮಹಾರಾಷ್ಟ್ರದಲ್ಲಿ ಹೊಂದಿದ್ದನು.



