ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ.ರೆಡ್ವಾನಿ ಪಯೀನ್ನ ನಿವಾಸಿ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೈಬಾ ಆಫ್ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ ನ ಕಮಾಂಡರ್ ಆಗಿದ್ದ.
ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದರು. ದಾರ್ಜೊತೆ ಹತ್ಯೆಗೊಳಗಾದ ಇಬ್ಬರು ಎಲ್ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.
ಕುಲ್ಗಾಮ್ನ ರೆಡ್ವಾನಿ ಪ್ರದೇಶದಲ್ಲಿ ಎನ್ಕೌಂಟರ್ ಸೈಟ್ನ ಸಮೀಪವಿರುವ ಮನೆಗಳ ಹುಡುಕಾಟದ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಅಲ್ಲಿ ಅಡಗಿದ್ದ ಭಯೋತ್ಪಾದಕನ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.