ರಾಯ್ಪುರ: ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತೆಲಂಗಾಣದ ನಕ್ಸಲ್ ವಿರೋಧಿ ಪಡೆ ಗ್ರೇಹೌಂಡ್ಸ್ ತಂಡವು ಕಾರ್ಯಾಚರಣೆ ಯಲ್ಲಿದ್ದಾಗ ಅಂತಾರಾಜ್ಯ ಗಡಿಯಲ್ಲಿರುವ ಪೂಜಾರಿ ಕಂಕೇರ್ ಅರಣ್ಯದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅವರು ಹೇಳಿದ್ದಾರೆ.ಗ್ರೇಹೌಂಡ್ಸ್ ತಂಡಕ್ಕೆ ಬೆಂಬಲ ನೀಡಲುಛತ್ತೀಸ್ಗಢ ಪೊಲೀಸರ ತಂಡವೂ ಸ್ಥಳದಲ್ಲಿದೆ ಎಂದು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರು ಮೃತಪಟ್ಟಿದ್ದು, ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಹೇಳಲಾಗಿದೆ.ಈ ವಾರದ ಆರಂಭದಲ್ಲಿ, ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 13 ನಕ್ಸಲೀಯರು ಹತರಾಗಿದ್ದರು.