ಬೆಂಗಳೂರು: ಎಲೆಕ್ರ್ಟಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಮತ್ತು ಚಂದಾಪುರ ರಸ್ತೆಯ ಡೌನ್ ರಾಂಪು ಬಳಿ ಪಾದ ಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾನೆ.
ಎಲೆಕ್ರ್ಟಾನಿಕ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಲು ಕ್ರಮ ಕೈಗೊಂಡಿರುತ್ತಾರೆ, ಅಪಘಾತವು ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಜರುಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಲ್ಲರ ಬಾಳವಾಡಿ ಕ್ರಾಸ್ ಬಳಿ ಕಾರ್ ಮೋಟರ್ ಬೈಕ್ ಸವಾರ ನರಸಿಂಹಮೂರ್ತಿಗೆ ೫೪,ಡಿಕ್ಕಿ ಹೊಡೆದ ಪರಿಣಾಮ ಪರಿಣಾಮ ಮೋಟಾರ್ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಮ್ಮನ ಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಮೋಟಾರ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಗುಲ್ಜಾರ್ ೪೨ ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾರೆ.



