ಬೆಂಗಳೂರು: ಬೆಂಗಳೂರು ಮಹಾನಗರದ ವಿವಿಧೆಡೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.ವಿಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿ ಗ್ರಾಮದ ಕಡತ ಹಳ್ಳಿಯ ಕಾಡಂಚಿನಲ್ಲಿ ಎಲೆಕ್ಟ್ರಿಕ್ ವೈರ್ ಮುರಿದು ಬಿದ್ದು ಮೋಹನ್(24) ಎಂಬ ವ್ಯಕ್ತಿ ಮೃತಪಟ್ಟಿರುತ್ತಾನೆ.
ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೌರಿಬಿದನೂರು ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಹೋಗುವಾಗ ಶ್ವಾನ ಅಡ್ಡ ಬಂದ ಪರಿಣಾಮ ಜಾರಿ ಬಿದ್ದು ಓರ್ವ ವ್ಯಕ್ತಿ ಮೃತಪಟ್ಟಿರುತ್ತಾನೆ. ಮೃತನನ್ನು ಮಧುನ್(21) ಎಂದು ಗುರುತಿಸಲಾಗಿದೆ.
ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಜಗರ್ನಾಥ್ ಮುಸಾವರ್(55) ಎಂಬ ವ್ಯಕ್ತಿ ಮೃತಪಟ್ಟಿರುತ್ತಾನೆ.ಈ ಘಟನೆ ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿರುವ ಡಿ ಮಾರ್ಟ್ ಮುಂಭಾಗ ನಡೆದಿರುತ್ತದೆ.