ಬುಲ್ಧಾನ (ಮಹಾರಾಷ್ಟ್ರ): ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆದ್ದಾರಿಯ ದೇಲ್‍ಗಾಂವ್ ಕೋಲ್ ಗ್ರಾಮದ ಬಳಿ ಮುಂಜಾನೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪ್ರಾಥಮಿಕ ಮಾಹಿತಿಯಂತೆ ಕಾರಿನಲ್ಲಿ ಡೀಸೆಲ್ ಕ್ಯಾನ್ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leave a Review