ಬೆಂಗಳೂರು : ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ಜನವರಿ ೮ ಕ್ಕೆ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು.
ಮುಡಾ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು ಏಕ ಸದಸ್ಯ ಪೀಠ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಏಕ ಸದಸ್ಯ ಪೀಠದ ಆದೇಶವನ್ನು ರದ್ದು ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆದು ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ವಿಚಾರಣೆಯನ್ನು ಜನವರಿ ೮ಕ್ಕೆ ಮುಂದೂಡಿ ಆದೇಶ ಹೊರಡಿಸಿತು.



