ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ನೇಣಿಗೆ ಶರಣು



