ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಸಮೀಪವಿರುವ ಯಲವಳ್ಳಿ ಮೊರಾರ್ಜಿ ವಸತಿ ಶಾಲೆ ಮಕ್ಕಳಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ಪ್ರಕರಣ ಬೆಂಗಳೂರಿನ ಪೀಣ್ಯ ಬಳಿ ಸಂಭವಿಸಿದೆ.
ಪೀಣ್ಯ ಸಮೀಪದ ಅಂದ್ರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುತ್ತಿರುವುದು ವಿಡೀಯೋ ಸೆರೆಹಿಡಿಯಲಾಗಿದ್ದು,
ಈ ಕ್ರಮದಿಂದಾಗಿ ಮಕ್ಕಳ ಪೋಷಕರು ತೀವ್ರ ಆಕ್ರೋಶ ಹೊರ ಹಾಕಿ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.