ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮತದಾನದ ಹಿಂದಿನ ದಿನ ಹಾಗೂ ಮತದಾನದ ದಿನದಂದು ಮತಗಟ್ಟೆ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್ ಲತಾ ಅವರು ಮಾತನಾಡಿದರು.
ಇ.ವಿ.ಎಂ, ವಿ ವಿ ಪ್ಯಾಟ್ ಯಂತ್ರಗಳ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಈ ಸಂದರ್ಭದಲ್ಲಿ ತೋರಿಸಲಾಯಿತು.
ಜಿಲ್ಲಾ ತರಬೇತುದಾರರಾದ ಅಮೀರ್ ಪಾಷಾ ಮತಗಟ್ಟೆ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯವಿಧಾನ ಗಳ ಬಗ್ಗೆ ತರಬೇತಿ ನೀಡಿದರು. ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಜಿ.ಪಂ. ಉಪ ಕಾರ್ಯದರ್ಶಿ ನಾಗರಾಜ್, ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ವಿನುತಾ ಎಂ. ಸಿ, ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು , ಸಹಾಯಕ ಚುನಾವಣಾಧಿಕಾರಿ ಗಳು , ಸೆಕ್ಟರ್ ಅಧಿಕಾರಿಗಳು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
Leave a Review