ಬೆಂಗಳೂರು: ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಶ್ವೇತಾಳನ್ನು ಪುದುಚೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.ತಂದೆ, ತಾಯಿ, ತಂಗಿಯನ್ನ ಕೊಲೆ ಮಾಡಿ ಆರೋಪಿ ಶ್ವೇತಾ ಪ್ರಿಯರಕನೊಂದಿಗೆ ತಲೆಮರಿಸಿಕೊಂಡಿದ್ದಳು. ಸದ್ಯ ಆರೋಪಿ ಶ್ವೇತಾಳನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಕೆನತ್ಗಾಗಿ ಹುಡುಕಾಟ ನಡೆಸಿದ್ದಾರೆ. ಕೊಲೆ ನಡೆದ ಮನೆ ಶೋಧದ ವೇಳೆ ಶ್ವೇತಾ ಡೈರಿ ಪತ್ತೆಯಾಗಿದೆ. ಹಲವು ದಿನಗಳಿಂದ ಶ್ವೇತಾ ಡೈರಿ ಬರೆಯುತ್ತಿದ್ದಳು. ಡೈರಿಯಲ್ಲಿ ಐ ಆಮ್ ಸ್ಯಾಡ್, ಐ ಆಮ್ ಲೋನ್ಲಿ, ಫೀಲಿಂಗ್ ಲವ್ಡ್, ಐ ಆ್ಯಮ್ ಡಿಪ್ರೆಸ್ಡ್, ಐ ಆ್ಯಮ್ ಸೂಪಿರಿಯರ್ ಹೀಗೆ ಹಲವಾರು ಬರಹಗಳು ಪತ್ತೆಯಾಗಿದೆ. ಸದ್ಯ ಪೊಲೀಸರು ಡೈರಿ ಸೇರಿದಂತೆ ಮನೆಯಲ್ಲಿ ಹಲವಾರು ಸಾಕ್ಷಿಗಳ ಕಲೆ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಒಂದು ಕಡೆ ನಿಲ್ಲದೇ ಆರೋಪಿ ಶ್ವೇತಾ ಹಾಗೂ ಪ್ರಿಯಕರ ಕೆನತ್ ಸಂಚಾರ ಮಾಡುತ್ತಿದ್ದರು. ಇವರಿಬ್ಬರ ಪತ್ತೆಗಾಗಿ ವೈಟ್ ಫೀಲ್ಡ್ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು ಶೋಧ ಕಾರ್ಯ ನಡೆಸುತ್ತಿದ್ದರು. ಇದೀಗ ಶ್ವೇತಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪ್ರಿಯಕರನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.



