ಬೆಂಗಳೂರು: ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ ಎಂದು ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕೋರ್ಟ್ಗೆ ತೆರಳುವ ಮೊದಲು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ ಕೋರ್ಟ್ ತೀರ್ಪು ಪ್ರಕಟಿಸಲಿ. ರಾಜಕೀಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. 200% ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ. ಜಯ ಸಿಗಬೇಕಾದರೆ ಕಷ್ಟ ಪಡಬೇಕು ಎಂದು ಹೇಳಿದರು.
ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ: ವಿನಯ್ ಕುಲಕರ್ಣಿ



