ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿರುವ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಟಿವಿಕೆ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಿದೆ. ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದೆ. ಮಂಗಳವಾರ ಪ್ರಕಟಿಸಿದ ಹೇಳಿಕೆಯಲ್ಲಿ, ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು ಎಂದು ಟಿವಿಕೆ ಆಗ್ರಹಿಸಿದೆ.



