ಚೆನ್ನೈ: ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ `ತಮಿಳಗ ವೆಟ್ರಿ ಕಳಗಂ’ ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಸ್ಥಾನಗಳು ಕಡಿಮೆಯಿದ್ದ ಕಾರಣ ಕಾಂಗ್ರೆಸ್, ಎಡಪಕ್ಷಗಳು, ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳು ವಿಜಯ್ ಅವರಿಗೆ ಹೊರಗಿನಿಂದ ಬೆಂಬಲ ನೀಡಿದ್ದವು.
ಆದರೆ, ತಮ್ಮ ಸರ್ಕಾರವನ್ನು ಮತ್ತಷ್ಟು ಸ್ಥಿರಗೊಳಿಸುವ ಮತ್ತು ಬಲಪಡಿಸುವ ಉದ್ದೇಶದಿಂದ ಸಿಎಂ ವಿಜಯ್ ಅವರು, ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆ ಪಕ್ಷದಿಂದ ಬಂಡಾಯವೆದ್ದು ವಿಶ್ವಾಸಮತದ ವೇಳೆ ತಮಗೆ ಅಡ್ಡ ಮತ ಚಲಾಯಿಸಿದ್ದ 25 ಶಾಸಕರನ್ನು ತಮ್ಮ ಸಂಪುಟಕ್ಕೆ
ಟಿವಿಕೆ ಪಕ್ಷಕ್ಕೆ ಸಿಪಿಐಎಂನಿಂದ ಬೆಂಬಲ ವಾಪಸ್ ಬೆದರಿಕೆ



