ಬೆಂಗಳೂರು : ವಿಲ್ಸನ್ ಗಾರ್ಡನ್ ಮತ್ತು ಪರಪ್ಪನ ಅಗ್ರಹಾರ ಪೊಲೀಸರು ಎರಡು ಪ್ರಕರಣಗಳಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿ ೨೭ ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ. ವಿಲ್ಸನ್ ಗಾರ್ಡನ್ ಪೊಲೀಸರು ಹಗಲೆಲ್ಲ ರಸ್ತೆಗಳಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ಹೊತ್ತು ಬೀಗ ಮುರಿದು ಕಳವು ಮಾಡಿದ್ದ ವ್ಯಕ್ತಿಯನ್ನು ಬಂಧಿಸಿ ೧೨೦ ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ ಇವುಗಳ ಮೌಲ್ಯ ೧೨ ಲಕ್ಷ ರೂಪಾಯಿಗಳಾಗಿರುತ್ತದೆ. ಈ ಆರೋಪಿಯು ಅಶೋಕನಗರ ಮತ್ತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ ಬೀಗ ಮುರಿದು ಕಳವು ಮಾಡಿದನು.
ಮತ್ತೊಂದು ಪ್ರಕರಣ ಪರಪ್ಪನ ಅಗ್ರಹಾರ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ ೧೫ ಲಕ್ಷ ರೂಪಾಯಿ ಬೆಲೆಬಾಳುವ ವಿವಿಧ ಬಗೆಯ ೧೪ ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಈ ಆರೋಪಿಯು ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದನ್ನು ತಿಳಿಸಿರುತ್ತಾರೆ. ಪರಪರಪ್ಪನ ಅಗ್ರಹಾರ, ಹೆಬ್ಬಗೋಡಿ ಮತ್ತು ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದನು.



