This is the title of the web page
This is the title of the web page

ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ತುಮಕೂರು: ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ನಿತೇಶ್ (14), ಪ್ರಜ್ವಲ್ (13) ಮೃತ ದುರ್ದೈವಿಗಳು.

ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.