This is the title of the web page
This is the title of the web page

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ರೈತರ ದುರ್ಮರಣ

ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈತರು ದುರ್ಮರಣಕ್ಕೀಡಾಗಿರುವ ಘಟನೆ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದಲ್ಲಿ ನಡೆದಿದೆ.

ನಾಲ್ವರು ರೈತರು ಹೊಲದಲ್ಲಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ವಾಹನ ಡಿಕ್ಕಿಯಿಂದಾಗಿ ಮಹಾಬಲೇಶ್ವರ ಶಿಂಧೆ(65), ಪುಂಡಲೀಕ ರೇಡಕರ್(75) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ.