ಆಸ್ಟೆçÃಲಿಯಾ ವಿರುದ್ಧ ವೈಟ್ ಬಾಲ್ ಸರಣಿ ಮುಗಿದ ಬಳಿಕ ಇದೀಗ ಟೀಂ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ನವೆಂಬರ್ ೧೪ ರಂದು
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು ೨೦೨೭ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (Wಖಿಅ) ಫೈನಲ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಭಾರತ ತನ್ನ ಅವಕಾಶಗಳನ್ನು ಬಲಪಡಿಸಿಕೊಳ್ಳುವ ಸಲುವಾಗಿ ಈ ಸರಣಿಯನ್ನು ಗೆಲ್ಲುವುದು ಅತ್ಯಗತ್ಯ.ಈ ಮಹತ್ವದ ಪಂದ್ಯಕ್ಕೆ ಭಾರತ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೆಲವು
ಮಹತ್ವದ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ಇಂಗ್ಲೆAಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಗಾಯಗೊಂಡು ಕಳೆದ ಕೆಲ ತಿಂಗಳು ವಿಶ್ರಾಂತಿ ಪಡೆದಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರು ತಂಡಕ್ಕೆ ಮರಳಿದ್ದು ಕಣಕ್ಕಿಳಿಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಜೊತೆಗೆ ಭಾರತ ‘ಎ’ ತಂಡದ ಪರ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರಿಗೂ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದೆ.
ಉಪನಾಯಕನಾಗಿರುವ ರಿಷಬ್ ಪಂತ್ ಅವರು ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಿದರೆ, ಧ್ರುವ್ ಜ್ಯುರೆಲ್ ಅವರು ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ. ರಿಷಬ್ ಪಂತ್ ಅವರು
ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ಭಾರತ ಎ ತಂಡದ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು. ಮೂಲಗಳ ಪ್ರಕಾರ, ಧ್ರುವ್ ಜುರೆಲ್ ಅವರು ವೇಗದ ಬೌಲಿಂಗ್ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಬದಲಿಗೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಜುರೆಲ್ ಅವರು ೬ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.ಆರಂಭದಲ್ಲಿ ೩ನೇ ಕ್ರಮಾಂಕಕ್ಕೂ ಅವರನ್ನು
ಪರಿಗಣಿಸಲಾಗಿತ್ತು, ಆದರೆ ತಂಡದ ಮ್ಯಾನೇಜ್ ಮೆಂಟ್ ಸಾಯಿ ಸುದರ್ಶನ್ ಅವರ ಮೇಲೆ ವಿಶ್ವಾಸವಿಟ್ಟಿದೆ. ಇ?ನು ಭಾರತದ ಪಿಚ್ಗಳಲ್ಲಿ ನಿತೀಶ್ ಕುಮಾರ್ ರೆಡ್ಡಿ ಅವರ ಬೌಲಿಂಗ್ನ
ಅವಶ್ಯಕತೆ ಅಷ್ಟಾಗಿ ಇರುವುದಿಲ್ಲ ಎಂಬ ಕಾರಣಕ್ಕೆ ಅವರನ್ನು ಕೈಬಿಡಲಾಗಿದೆ.
ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, “ಜುರೆಲ್ ಅವರು ಒಬ್ಬ ವಿಶೇಷ ಬ್ಯಾಟರ್ ಆಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅವರಿಗೆ ತಂಡದಲ್ಲಿ ಎರಡು
ಸ್ಥಾನಗಳಲ್ಲಿ ಅವಕಾಶ ನೀಡಬಹುದು. ಒಂದು ಸಾಯಿ ಸುದರ್ಶನ್ ಆಡುವ ೩ನೇ ಕ್ರಮಾಂಕ, ಆದರೆ ಅವರು ತಮ್ಮ ಕೊನೆಯ ಟೆಸ್ಟ್ನಲ್ಲಿ ಅರ್ಧಶತಕ ಗಳಿಸಿರುವುದರಿಂದ ಅದರಲ್ಲೇ
ಮುಂದುವರಿಯುವ ಸಾಧ್ಯತೆ ಹೆಚ್ಚು. ಇನ್ನೊಂದು ಸ್ಥಾನ ನಿತೀಶ್ ಕುಮಾರ್ ರೆಡ್ಡಿ ಅವರದ್ದು. ಭಾರತದ ಪಿಚ್ಗಳಲ್ಲಿ ಅವರ ಬೌಲಿಂಗ್ನ ಅವಶ್ಯಕತೆ ಅಷ್ಟಾಗಿ ಇರುವುದಿಲ್ಲವಾದ್ದರಿಂದ,
ಅವರ ಬದಲು ಜುರೆಲ್ ಅವರಿಗೆ ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದ್ದಾರೆ. ಮೊದಲ ಟೆಸ್ಟ್ಗೆ ಭಾರತ ಸಂಭಾವ್ಯ ಇಲೆವೆನ್ ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುAದರ್, ಕುಲದೀಪ್ ಯಾದವ್, ಮೊಹಮ್ಮದ್
ಸಿರಾಜ್ ಮತ್ತು ಜಸ್ಪಿçÃತ್ ಬುಮ್ರಾ.



