ಪಾಟ್ನಾ: ಛತ್ಪೂಜೆ ವೇಳೆ ಪಕ್ಕದ ಮನೆಯವರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದಾರೆ.
ಛತ್ ಪೂಜೆ ನಡೆಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ ಮನೆಯವರು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಲಖಿಸಾರೈನ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ಹೇಳಿದ್ದಾರೆ. ಅವರ ನೆರೆಹೊರೆಯವರಾದ ಆಶಿಶ್ ಚೌಧರಿ ಅವರ ಹತ್ತಿರ ಬಂದು, ಬಳಿಕ ಪಿಸ್ತೂಲ್ನಿಂದ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ ಕುಟುಂಬದ ಆರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಕಳೆದ 10 ದಿನಗಳ ಹಿಂದೆ ಚೌಧರಿ ಮತ್ತು ಸಂತ್ರಸ್ತರ ನಡುವೆ ಜಗಳ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಆರೋಪಿಗಳನ್ನು ಗುರುತಿಸಿ ಬಂಧಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಕುಮಾರ್ ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.