ರಾಮನಗರ: ತಾಲ್ಲೂಕಿನ ಕಟ್ಟಮಾನದೊಡ್ಡಿಯಲ್ಲಿ ಬುಧವಾರ ಮೂವರಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.ಮೃತ ಯುವಕನನ್ನು ಕೊಂಕಾಣಿದೊಡ್ಡಿಯ ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತ್ರಿಬ್ಬಲ್ ರೈಡ್ ನೊಂದಿಗೆ ಸಂಜೆ 6ರ ಸುಮಾರಿಗೆ ಮಂಚನಬೆಲೆ ಕಡೆಯಿಂದ ರಾಮನಗರಕ್ಕೆ ಬರುತ್ತಿದ್ದರು. ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಸವಾರ, ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆ ಪಕ್ಕದ ಮನೆ ಬಳಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾರಾಯಣಸ್ವಾಮಿ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದರು.
ಸ್ಥಳೀಯರ ನೆರವಿನಿಂದ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎನ್ನಲಾಗಿದೆ. ಮತ್ತೊಬ್ಬ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದಾನೆ.
ಬೈಕ್ನಲ್ಲಿದ್ದ ಮೂವರೂ ಸ್ನೇಹಿತರಾಗಿದ್ದು, ಮಂಚನಬೆಲೆ ಬಳಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿ ಮೃತರು ಹಾಗೂ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.