ತಿ.ನರಸೀಪುರ: ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿರುವ ಘಟನೆ ಸಂಭವಿಸಿದೆ.
ತಾಲೂಕಿನ ಮುಸುವಿನಕೊಪ್ಪಲು ಗ್ರಾಮದ ಚಂದ್ರಪ್ಪ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿದ್ದ ಕರು ತಿನ್ನಲು ಇಂದು ಮುಂಜಾನೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸೆರೆ ಸಿಕ್ಕಿರುವ ಚಿರೆತಗಳನ್ನ ನೋಡಲು ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದ್ದಾರೆ.
Leave a Review