ಬೆಂಗಳೂರು: ವೈಟ್ಫೀಲ್ಡ್ ಮತ್ತು ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ರಾತ್ರಿ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರ್ ಗಾಂಧಿ ಸರ್ಕಲ್ ಬಳಿ ವಾಟರ್ ಟ್ಯಾಂಕರ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ದೇಶದ ಸೆಕ್ಯೂರಿಟಿ ಮೃತಪಟ್ಟಿರುತ್ತಾನೆ.ಕಪೇಂದ್ರ ಮೋಜಿ 31, ರಸ್ತೆ ದಾಟುವ ಸಮಯದಲ್ಲಿ ರಾತ್ರಿ 8ರ ಸುಮಾರಿಗೆ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ ವೈಟ್ಫೀಲ್ಡ್ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.ಮತ್ತೊಂದು ಅಪಘಾತ ಪ್ರಕರಣ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೆಡಹಳ್ಳಿ ಮೇಲ್ ಸೇತುವೆ ಬಳಿ ಅಪರಿಚಿತ ವ್ಯಕ್ತಿಗೆ ಅಪರಿಚಿತ ವಾಹನ ರಾತ್ರಿ 10.45ರ ಸುಮಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.. ಕೆಆರ್ ಪುರಂ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ಸ್ಥಳದಲ್ಲಿ ಹಾಕಿರುವ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿ ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಪತ್ತೆ ಮಾಡಿ ಮತ್ತು ಮೃತನನ್ನು ಪತ್ತೆ ಮಾಡಲು ಕ್ರಮ ಕೈಗೊಂಡಿರುತ್ತಾರೆ.



