ಬೆಂಗಳೂರು: ಜ್ಞಾನಭಾರತಿ ಪೊಲೀಸರು ನವೀನ್ ಎಂಬ ಆರೋಪಿಯನ್ನು ಬಂಧಿಸಿ ಸುಮಾರು 11 ಲಕ್ಷ ರೂ ಬೆಲೆ ಬಾಳುವ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿ ಕೊಂಡಿರುತ್ತಾರೆ.
ಈತನು ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದನು. ಜ್ಞಾನಭಾರತಿ ಠಾಣೆಯ ಎರಡು ಕುಂಬಳಗೂಡು ಪೊಲೀಸ್ ಠಾಣೆಯ ಒಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಒಂದು ಪ್ರಕರಣ ಹಾಗೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ ಮತ್ತು ಬೆಂಗಳೂರು ನಗರದ ಹಲವಾರು ಕಡೆ ಗ್ರಾಹಕರಂತೆ ಗಮನ ಸೆಳೆದು ಕಳವು ಮಾಡಿದ್ದ 41 ಮೊಬೈಲ್ ಫೊನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.