ಜನವರಿ 29ರಂದು ದಕ್ಷಿಣ ಆಫ್ರಿಕಾದ ಪೊಟ್ಚೆಫ್‍ಸ್ಟ್ರೂಮ್‍ನ ಸೆನ್ವೆಸ್ ಪಾರ್ಕ್‍ನಲ್ಲಿ ನಡೆದ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 7 ವಿಕೆಟ್‍ಗಳ ಐತಿಹಾಸಿಕ ಗೆಲುವು ದಾಖಲಿಸಿತು.
ಭಾರತ ವನಿತೆಯರ ಅದ್ಭುತ ವಿಜಯದ ನಂತರ ಭಾರತ ತಂಡಕ್ಕೆ ಶುಭಾಶಯಗಳು ಟ್ವಿಟ್ಟರ್‍ನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಭಿನಂದಿಸಿದ್ದಾರೆ. ಭಾರತದಲ್ಲಿ ಮಹಿಳಾ ಕ್ರಿಕೆಟ್ ಏರಿಳಿತದಲ್ಲಿದೆ ಮತ್ತು ವಿಶ್ವಕಪ್ ವಿಜಯವು ಮಹಿಳಾ ಕ್ರಿಕೆಟ್‍ನ ಸ್ಥಾನವನ್ನು ಮುಂದಿನ ಹಂತಗಳಿಗೆ ತೆಗೆದುಕೊಂಡು ಹೋಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ ಐದು ಕೋಟಿ ರೂಪಾಯಿ ಬಹುಮಾನ ಘೋಷಿಸಲು ಸಂತೋಷವಾಗುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದರು.
ಎದುರಾಳಿ ಇಂಗ್ಲೆಂಡ್ ಮಹಿಳಾ ತಂಡ ನೀಡಿದ್ದ 69 ರನ್‍ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ಮಹಿಳಾ ತಂಡವು, 14 ಓವರ್‍ಗಳಲ್ಲಿ 3 ವಿಕೆಟ್ ಕಳೆದುಕೊಂಡು 69 ರನ್ ಗಳಿಸಿ ಗೆಲುವಿನ ಗುರಿ ತಲುಪಿತು. ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನ
ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿ ರೂಪಾಯಿಗಳ ಬಹುಮಾನವನ್ನು ಘೋಷಿಸಿದರು. ಭಾರತೀಯ ಬೌಲರ್‍ಗಳು ಫೈನಲ್ ಪಂದ್ಯದಲ್ಲಿ ಉತ್ತಮ ಫಾರ್ಮ್ನಲ್ಲಿದ್ದರು. ಇಂಗ್ಲೆಂಡ್ ಬ್ಯಾಟಿಂಗ್ ಲೈನ್‍ಅಪ್ ಅನ್ನು ಆರಂಭದಿಂದಲೇ ಕಟ್ಟಿಹಾಕಿದರು.
ಟಿಟಾಸ್ ಸಾಧು, ಅರ್ಚನಾ ದೇವಿ ಮತ್ತು ಪಾರ್ಶವಿ ಚೋಪ್ರಾ ತಲಾ ಎರಡು ವಿಕೆಟ್‍ಗಳನ್ನು ಕಬಳಿಸಿ 17.1 ಓವರ್‍ಗಳಲ್ಲಿ 68 ರನ್‍ಗಳಿಗೆ ಆಲೌಟ್ ಆಗುವಂತೆ ಪ್ರದರ್ಶನ ನೀಡಿದರು. 69 ರನ್‍ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ ಇನ್ನೂ ಆರು ಓವರ್‍ಗಳು ಬಾಕಿ ಇರುವಂತೆಯೇ ಏಳು ವಿಕೆಟ್‍ಗಳಿಂದ ಗೆದ್ದು ಭಾನುವಾರದಂದು ಚೊಚ್ಚಲ ಅಂಡರ್-19 ಮಹಿಳಾ ವಿಶ್ವಕಪ್ ಚಾಂಪಿಯನ್ ಆಗಿ ಕಿರೀಟವನ್ನು ಅಲಂಕರಿಸಿತು.
Leave a Review