ಬೆಂಗಳೂರು: ಈಗಾಗಲೇ ವಿಧಾನಸಭೆ ಚುನಾವಣೆ ಸಂಬಂಧ ಎರಡು ಹಂತದಲ್ಲಿ 166 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ತನ್ನ ಮೂರನೇ ಪಟ್ಟಿಯನ್ನು ಸಿದ್ದಪಡಿಸಲು ನಿನ್ನೆಯಿಂದ ಸಭೆ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಮುಖಂಡರೊಂದಿಗೆ ಸಮಾಲೋಚನೆ ಸಭೆ ನಡೆದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸಭೆ ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಈಗಾಗಲೇ ಕಾಂಗ್ರೆಸ್ ಟಿಕೆಟ್‍ಗಾಗಿ ಪೈಪೋಟಿ ನಡೆಸುತ್ತಿರುವ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಹಾಗೂ ಅಭ್ಯರ್ಥಿ ಆಕಾಂಕ್ಷೆಗಳು ಬಹುತೇಕರು ದೆಹಲಿಗೆ ತೆರಳಿ ಟಿಕೆಟ್ ಪಡೆಯಲು ತಮ್ಮ ಮುಖಂಡರ ಮೂಲಕ ಅಂತಿಮ ಹಂತದ ಯತ್ನ ನಡೆಸಿದ್ದಾರೆ. ಕೈ ಮುಖಂಡರು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆವರೆಗೂ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಲು ಕಾದು ನೋಡುವ ತಂತ್ರ ಅನುಸರಿಸುತ್ತದೆ ಎಂದು ಹೇಳಲಾಗುತ್ತಿದೆ.
Leave a Review