ದೇವನಹಳ್ಳಿ: ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ಐ.ಸಿ.ಡಿ.ಎಸ್ ಸೇವೆಗಳು, ಮಾತ್ರಪೂರ್ಣ ಯೋಜನೆ, ಪೋಷಣ್ ಅಭಿಯಾನ ಯೋಜನೆ ಹಾಗೂ ಪಂಚಾಯತ ರಾಜ್ ಇಲಾಖೆಯಿಂದ ಅಂಗನವಾಡಿ ಕೇಂದ್ರಕ್ಕೆ ನೀಡುತ್ತಿರುವ ಸಹಕಾರ ಮತ್ತು ಸಹಯೋಗದ ಕುರಿತು ವೀಕ್ಷಿಸಲು ಮತ್ತು ಗ್ರಾಮ ಸಭೆ ನಡೆಸಿ ಸಮುದಾಯದೊಂದಿಗೆ ಹಾಗೂ ಗ್ರಾಪಂ ಪ್ರತಿನಿಧಿಗಳೊಂದಿಗೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಶಿಶು ಅಭಿವೃದ್ಧಿ ಯೋಜನೆಯ ಪೋಲನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಪ್ರಾನ್ಸ್ ದೇಶದ ಯುನಿಸೆಫ್ ತಂಡ ಬೇಟಿ ನೀಡಿತ್ತು.
ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾನಿರೂಪಣಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಾತನಾಡಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ದೇವನಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಪೋಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕರು, ತಾಲೂಕು ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಉಪಸ್ಥಿತರಿದ್ದರು.