ಬೆಂಗಳೂರು: ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಸರ್ದಾರ್ ಏಕತಾ ಪಾದಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.ಶಾಸಕ ಗೋಪಾಲಯ್ಯ ಮಾತನಾಡಿ,ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರು ಈ ದೇಶವನ್ನು ಒಟ್ಟುಗೂಡಿಸುವಲ್ಲಿ ತಮ್ಮದೇ ಕೊಡುಗೆ ನೀಡಿದ್ದಾರೆ, ಭಾರತೀಯರು ಎಲ್ಲರೂ ಒಂದು ಎಂಬ ನಿಟ್ಟಿನಲ್ಲಿ ಈ ಏಕತಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಬಗ್ಗೆ ವಿದ್ಯಾರ್ಥಿಗಳು, ಮಕ್ಕಳಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ವತಿಯಿಂದ ಈ ಏಕತೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಪಾದಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಏಕತೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯುವ ಜನ ಸೇವೆ ಇಲಾಖೆ ಮತ್ತು ಮೈ ಭಾರತ್ ಯುವಕ ಕೇಂದ್ರದ ರಾಜ್ಯ ನಿರ್ದೇಶಕ ಅಶೋಕ್ ಕುಮಾರ್, ಮೈ ಭಾರತ್ ಸಹಾಯಕ ನಿರ್ದೇಶಕರಾದ ನಾಗಲಕ್ಷ್ಮೀ, ಸ್ಥಳೀಯ ಮುಖಂಡರಾದ ಶಿವಾನಂದ ಮೂರ್ತಿ, ರಾಘವೇಂದ್ರ ಶೆಟ್ಟಿ, ಮಾಜಿ ಉಪ ಮಹಾಪೌರ ಹರೀಶ್ , ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷಿ÷್ಮ ನಾರಾಯಣ, ಮಾಜಿ ಪಾಲಿಕೆ ಸದಸ್ಯ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.



