ಕೋಲಾರ: ಮೊರಾರ್ಜಿ ವಸತಿ ಶಾಲೆ ಮಕ್ಕಳಿಂದ ಶೌಚಾಲಯ ಗುಂಡಿ ಸ್ವಚ್ಛಗೊಳಿಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದಿದೆ ಎನ್ನಲಾದ ವಸತಿ ಶಾಲೆಗೆ ಇಂದು ಕೇಂದ್ರ ಸಾಮಾಜಿಕ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ಭೇಟಿ ನೀಡಿದ್ದಾರೆ.
ಸಚಿವರು ತಮ್ಮ ಭೇಟಿ ವೇಳೆ ಸ್ಥಳದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಶಾಲೆಯಲ್ಲಿನ ದಾಖಲಾತಿಗಳ ಸಂಬಂಧ ಸಚಿವರ ಎದುರಿನಲ್ಲೇ ಲಾಕರ್ ಒಡೆದು ದಾಖಲೆ ಪತ್ರ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರೋರ್ವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಲಾಕರ್ ಒಡೆಯಲಾಯಿತು ಎಂದು ತಿಳಿದುಬಂದಿದೆ.ಪರಿಶೀಲನೆ ನಂತರ ಮಾತನಾಡಿರುವ ಸಚಿವ ನಾರಾಯಣ ಸ್ವಾಮಿ ಘಟನೆಯನ್ನು ಖಂಡಿಸಿ ಈ ಪ್ರಕರಣವನ್ನು ಮುಚ್ಚಿ
ಹಾಕುವ ಪ್ರಯತ್ನ ನಡೆಸಲಾಗಿತ್ತು.
ರಾಜಿ ಪಂಚಾಯಿತಿ ಮಾಡಲಾಗಿತ್ತು. ಮುಖ್ಯಮಂತ್ರಿಯವರು ಈ ಸ್ಥಳಕ್ಕೆ ಭೇಟಿ ನೀಡಬೇಕಾಗಿತ್ತು. ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.