ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸಚಿವರಾದ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುA ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು



