ಬೈರುತ್: ಇರಾನ್ ಮತ್ತು ಅಮೆರಿಕದ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಇಸ್ರೇಲ್ ಮತ್ತು ಲೆಬನಾನ್ ಯುದ್ಧವನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯಲ್ಲಿ 10 ದಿನಗಳ ಕದನ ವಿರಾಮಕ್ಕೆ ಸಹಮತ ವ್ಯಕ್ತವಾಗಿದೆ. ಈ ನಡುವೆ ವಿಚಾರದಲ್ಲಿ ಟ್ರಂಪ್ ಮತ್ತೆ ಬಡಾಯಿ ಕೊಚ್ಚಿಕೊಂಡರೆ ಮತ್ತೊಂದು ಕಡೆ ಇರಾನ್ ಮೇಲೆ ಮಿಲಿಟರಿ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಲೆಬನಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಅಮೆರಿಕದ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಎರಡು ದೇಶಗಳು ಹತ್ತು ದಿನಗಳ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿವೆ. ಈ ಮಾಹಿತಿಯನ್ನು ಖಚಿತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.
ಟ್ರೂತ್ ಸೋಷಿಯಲ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಟ್ರಂಪ್, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದೆ.



