ಕೋಲಾರ: ತಾಲೂಕಿನ ವಕ್ಕಲೇರಿ ಮಾರ್ಕಂಡೇಶ್ವರ ಬೆಟ್ಟದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ನೀರಿನ ವಾಟರ್ ಬಾಟಲ್ ವಿತರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಪ್ರತಿ ವರ್ಷ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಲ್ಲಿಯ ಮಾರ್ಕಂಡೇಶ್ವರ ಬೆಟ್ಟದಲ್ಲಿ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆಗಳು ನಡೆಯುತ್ತವೆ ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ ಭಕ್ತರಿಗೆ ತೊಂದರೆಯಾಗದAತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ನೆಮ್ಮದಿ ಕಾಣಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಸಹ ಜಾತ್ರೆಗೆ ಬರುವ ಭಕ್ತಾದಿ
ಗಳಿಗೆ ೧೫ ಸಾವಿರ ವಾಟರ್ ಬಾಟಲ್ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಮುಂದಿನ ವರ್ಷದಿಂದ ಅನ್ನದಾನದ ವ್ಯವಸ್ಥೆ ಮಾಡಲಾಗುತ್ತದೆ.
ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಟ್ಟದಲ್ಲಿ ಎರಡು ಕೊಳವೆಬಾವಿ ಕೊರೆಸಿದ್ದಾರೆ ನೀರು ಸಿಕ್ಕಿಲ್ಲ ಜಾತ್ರೆಯ ನಂತರ ಮತ್ತೊಂದು ಹಾಕಿಸಲಾಗುತ್ತದೆ ಜೊತೆಗೆ ಈ ಬೆಟ್ಟವನ್ನು ಪ್ರವಾಸಿ ತಾಣಕ್ಕೆ ಸೇರ್ಪಡೆ ಮಾಡಿದ್ದು ಮುಂದಿನ ದಿನಗಳಲ್ಲಿ ದೇವಾಲಯ ಸಮಿತಿ ಮಾಡಿ ಅಭಿವೃದ್ಧಿಗೆ ಅಧ್ಯತೆ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಐ.ಲೋಕೇಶ್, ಮುಖಂಡರಾದ ಮುನಿವೆಂಕಟಪ್ಪ, ಟೈಲರ್ ಶಿವಕುಮಾರ್, ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ರಾಜಕುಮಾರ್, ಪೀಸ್ ಮಂಜು, ಅರುಣ್, ಆನಂದ್, ಶ್ರೀಧರ್, ಓಬಣ್ಣ, ಇನಾಯಿತ್, ಬೊಟ್ಟು ರಾಜಪ್ಪ, ಶಂಕರಪ್ಪ, ಮುಂತಾದವರು ಇದ್ದರು.



