ಚಳ್ಳಕೆರೆ: ಸುರಪುರದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜ ವೆಂಕಟಪ್ಪ ನಾಯಕರವರು ತೀವ್ರ ಹೃದಯಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.
ಈ ಹಿನ್ನೆಲೆಯಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಮೃತರ ಪಾರ್ಥಿವ ಶರೀರಕ್ಕೆ ಹೂವಿನ ಮಾಲೆ ಹಾಕಿ. ಮೃತರಿಗೆ ಗೌರವ ಸಮರ್ಪಣೆ ಮಾಡಿ.ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥನೆ ಮಾಡಿ.ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ.
ರಾಜ ವೆಂಕಟಪ್ಪ ನಾಯಕರು ವಾಲ್ಮೀಕಿ ನಾಯಕ ಸಮುದಾಯದ ಅತ್ಯಂತ ಹಿರಿಯ ಶಾಸಕರಾಗಿದ್ದು. ನನ್ನ ಜೊತೆಯಲ್ಲಿ ಅವರು ಸಹ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಅಗಲಿಕೆ ಯಿಂದ ವಾಲ್ಮೀಕಿ ನಾಯಕ ಸಮುದಾಯಕ್ಕೆ ಹಾಗೂ ಉತ್ತರ ಕರ್ನಾಟಕದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನನ್ನು ಕಳೆದು ಕೊಂಡಂತಾಗಿದೆ ವಾಲ್ಮೀಕಿ ನಾಯಕ ಸಮಾಜಕ್ಕೆ ಇವರ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.