ಬೆಳಗಾವಿ: ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಪಟ್ಟಂತೆ ಕಾಕತಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಲಕ್ಕಪ್ಪ ನಾಯ್ಕ್, ಲಕ್ಕವ್ವ ಯಲ್ಲಪ್ಪ ನಾಯ್ಕ್, ಶೋಭಾ ರಾಜಪ್ಪ ಎಂಬುವರೇ ಬಂಧಿತಆರೋಪಿಗಳು. ಬಂಧಿತ ಆರೋಪಿಗಳು ಸಂಬಂಧಿಕರ ಮನೆಯಲ್ಲಿ ತಲೆ ಮರೆಸಿಕೊಂಡಿ ದ್ದಾಗ ಇಂದು ಬೆಳಗಿನ ಜಾವ ಅವರನ್ನು ಬಂಧಿಸಲಾಗಿದೆ.
ಇವರ ಬಂಧನದಿಂದಾಗಿ ಇದವುರೆಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ 11 ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ. ಒಟ್ಟು 12 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.