This is the title of the web page
This is the title of the web page

ದಿ. ಡಾ. ವಿಷ್ಣುವರ್ಧನ್ ರವರ ಹುಟ್ಟು ಹಬ್ಬದ ಅಂಗವಾಗಿ ಡಾ.ವಿಷ್ಣು ಸೇನಾ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮ

ದೊಡ್ಡಬಳ್ಳಾಪುರ: ದಿ. ಡಾ. ವಿಷ್ಣುವರ್ಧನ್ ರವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಡಾ.ವಿಷ್ಣು ಸೇನಾ ಸಮಿತಿಯ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಗರದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೇಡ್ ವಿತರಣೆ ಮಾಡಿದ ನಂತರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಿರೀಶ್ ಹಾಗೂ ಡಾ.ವೈಶಾಕ್ ರವರನ್ನ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾ.ವಿಷ್ಣು ಸೇನಾ ಸಮಿತಿಯ ಅದ್ಯಕ್ಷ ಗಂಗರಾಜು.ಎಲ್, ಕನ್ನಡ ಪಕ್ಷದ ಹಿರಿಯ ಮುಖಂಡ
ಸಂಜೀವ್  ನಾಯಕ್, ತಾ.ಅದ್ಯಕ್ಷ ವೆಂಕಟೇಶ್ ಸೇರಿದಂತೆ ಡಾ.ವಿಷ್ಣುವರ್ಧನ್ ಅಭಿಮಾನಿಗಳು ಭಾಗವಹಿಸಿದ್ದರು.