ದೊಡ್ಡಬಳ್ಳಾಪುರ: ನಗರಸಭೆ ಕಾರ್ಯಾಲಯದ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ವಿಶೇಷ ಚೇತನರ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಅಸಿಸ್ಟೆಂಟ್ ಕಮಿಷನರ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಆದ ಶ್ರೀ ಶ್ರೀನಿವಾಸ್ ರವರು ಹಸಿರು ನಿಶಾನೆ ತೋರಸಿ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 100 ಮತದಾನ ಆಗುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಚುನಾವಣೆಯಲ್ಲಿ ಹಿರಿಯರು ವಿಶೇಷವಾಗಿ ವಿಕಲಚೇತನರು ಹಾಗೂ ಮಹಿಳೆಯರು ಮತ ಚಲಾಯಿಸಲು ಬೇಕಾದ ಎಲ್ಲಾ ಅಗತ್ಯ ಸೌಕರ್ಯಗಳನ್ನು ಮತಗಟ್ಟೆಗಳಲ್ಲಿ ಮಾಡಲಾಗಿದೆ. ಅಂದು ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ತಮ್ಮ ಅಮೂಲ್ಯ ಮತವನ್ನು ನೈತಿಕವಾಗಿ ಚಲಾಯಿಸಬೇಕು. ಎಲ್ಲರ ಮತವು ಅಮೂಲ್ಯ, ಇಲ್ಲಿ ಎಲ್ಲರೂ ಸಮಾನರು ಎಂದು ತಿಳಿಸುವ ಮುಖಾಂತರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮುನಿರಾಜು ರವರು ಹಾಗೂ ನಗರಸಭೆಯ ಕಮಿಷನರ್ ಪರಮೇಶ್ವರ್ ರವರು ಹಾಗೂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಕುಮಾರ್ ಮತ್ತು VRW ನಾರಾಯಣಸ್ವಾಮಿ ಮತ್ತು ನಗರಸಭೆ ಸಿಬ್ಬಂದಿ ಹಾಜರಿದ್ದರು.