ಬೆಂಗಳೂರು: ನಿನ್ನೆ ವಯೋಸಹಜ ಅನಾರೋಗ್ಯದಿಂದ ನಿಧನರಾದಂತ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅಂತಿಮ ದರ್ಶನದ ನಂತರ ಸಂಜೆ 4ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ.
ಈ ಬಳಿಕ ಮುಖ್ಯಮಂತ್ರಿಗಳ ಸಲಹೆ ಹಾಗೂ ವಿನೋದ್ ರಾಜ್ ಕುಮಾರ್ ಒಪ್ಪಿಗೆಯ ಮೇರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ, ಅಲ್ಲಿಂದ ನೇರವಾಗಿ ಅವರ ಸೋಲದೇವನಹಳ್ಳಿಯಲ್ಲಿರುವಂತ ತೋಟಕ್ಕೆ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಸಂಜೆ.4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ.