ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ್(91) ಅವರು ನಿಧನರಾಗಿದ್ದಾರೆ.ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅರ್ಜುನ್ ದೇವ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಸೇವೆಸಲ್ಲಿಸಿದ್ದರು.
ಕರ್ನಾಟಕ ಪತ್ರ ಕರ್ತರ ಸಹಕಾರ ಸಂಘದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ಕ್ಲಬ್ ಆಫ್ ಬೆಂಗಳೂರು, ಬೆಂಗಳೂರು ವರದಿಗಾರರ ಕೂಟ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು, ಸಂತಾಪ ವ್ಯಕ್ತಪಡಿಸಿದ್ದಾರೆ.