ಹುಬ್ಬಳ್ಳಿ : ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ.
ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ.
ನಾನು ಜಿಮ್ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನ ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ. ಬಳಿಕ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕಿದ್ದ. ಇದಾದ ಬಳಿಕ ಬೆದರಿಕೆ ಹಾಕಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.
ಸದ್ಯ ಯುವತಿಯ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಬಿಎನ್ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಲವ್ ಜಿಹಾದ್ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಮೀರ್ ಬಂಡವಾಳ ಮತ್ತಷ್ಟು ಬಯಲಾಗಿದೆ.
ಜಿಮ್ ಟ್ರೈನರ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತೆ!



