ಗೌರಿಬಿದನೂರು: ತಾಲ್ಲೂಕಿನ ಕಸಬಾ ಹೋಬಳಿಯ ಪುರಾಣ ಪ್ರಸಿದ್ದ ಪುಣ್ಯಕ್ಷೇತ್ರ ವಿದುರಾಶ್ವತ್ಥದಲ್ಲಿ ಅನಾದಿಕಾಲದಿಂದಲೂ ನೆಲೆಗೊಂಡಿರುವ ಶ್ರೀ ವಿದುರಾಶ್ವತ್ಥ ನಾರಾಯಣಸ್ವಾಮಿಯ ಬ್ರಹ್ಮ ರಥೋತ್ಸವವು ಅತ್ಯಂತ ವೈಭವದಿಂದ ಜರುಗಿತು.
ರಥೋತ್ಸವಕ್ಕೆ ಸ್ಥಳೀಯ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ವಿದುರನ ಭಕ್ತಿಗೆ ಒಲಿದು ನೆಲೆ ನಿಂತ ಶ್ರೀ ವಿದುರಾಶ್ವತ್ಥನಾರಾಯಣ ಸ್ವಾಮಿಯ ಕೃಪೆ ನಾಡಿನ ಜನತೆಯ ಮೇಲೆ ಇರಲಿ, ಉತ್ತಮ ಮಳೆ ಬೆಳೆಯಾಗಿ ಸರ್ವರೂ ಸುಖ ಸಂತೋಷದಿAದ ಜೀವನ ಸಾಗಿಸಲೆಂದು ಪ್ರಾರ್ಥಿಸಿದರು.
ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಹೋಮ ಹವನಗಳು ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ಜರುಗಿದವು. ಭಕ್ತಾದಿಗಳು ದೇಗುಲದ ಮುಂದೆ ಸಾಲುಗಟ್ಟಿ ನಿಂತು ಅಶ್ವತ್ಥನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಿದರು.
ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಮಂಗಳವಾದ್ಯಗಳೊAದಿಗೆ ದೇವರ ನಾಮಸ್ಮರಣೆಯೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಏರಿಸಿ, ಭಕ್ತರು ಭಕ್ತಿಭಾವದಿಂದ ರಥವನ್ನು ಎಳೆದರು. ಸಾಗುವ ಹಾದಿಯಲ್ಲಿ ಭಕ್ತರು ಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು.
ನೆರೆದಿದ್ದ ಭಕ್ತರಿಗೆ ದೇವಾಸ್ಥನದ ವತಿಯಿಂದ ಕುಡಿಯುವ ನೀರು, ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಗಿತ್ತು. ತಾಲ್ಲೂಕು ಹಾಗೂ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ರಾಜ್ಯದ ವಿವಿಧ ಮೂಲೆಗಳಿಂದ ಮತ್ತು ನೆರೆ ರಾಜ್ಯ ಆಂಧ್ರಪ್ರದೇಶದ ಹಿಂದೂ¬ಪುರ, ಪೆನಕೊಂಡ, ಅನಂತಪುರ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.
ಜಾತ್ರೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದAತೆ ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಇದೇ ವೇಳೆ ತಹಸೀಲ್ದಾರ್ ಅರವಿಂದ್.ಕೆ.ಎಂ, ಮುಖಂಡರಾದ ರಾಜೇಂದ್ರ ಪ್ರಸಾದ್, ಶ್ರೀನಿವಾಸಗೌಡ ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಈ ಬಾರಿಯ ಜಾತ್ರಾ ಮಹೋತ್ಸವವನ್ನು ಶಾಸಕರಾದ ಪುಟ್ಟಸ್ವಾಮಿ ಗೌಡರು ವಿಧ್ಯುಕ್ತವಾಗಿ ಉದ್ಘಾಟಿಸಿದ್ದಾರೆ, ಭಕ್ತಾದಿಗಳ ಹಿತದೃಷ್ಟಿಯಿಂದ ಸಕಲ ಬಿಗಿ ಭದ್ರತಾ ವ್ಯವಸ್ಥೆಯನ್ನು ಪೋಲಿಸ್ ಇಲಾಖೆಯಿಂದ ಕಲ್ಪಿಸಲಾಗಿತ್ತು. ಸುಮಾರು 15,000 ಕ್ಕೂ ಹೆಚ್ಚು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದಿದ್ದಾರೆ.
ವಿದುರಾಶ್ವತ್ಥ ನಾರಾಯಣಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ



