ಚನ್ನೈ: ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಯಾರೂ ನಿರೀಕ್ಷಿಸದ ಊಹೆಗೂ ಮೀರಿ ಜಯಸಾಧಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.
ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಟಿವಿಕೆ ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬಹುಮತಕ್ಕೆ ಕೊರತೆಯುಂಟಾಗಿದೆ.
ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಬೆಂಬಲ ಕೋರಿ ಆ ಪಕ್ಷಗಳ ಬೆಂಬಲ ಕೋರಿ ವಿಜಯ್ ಅವರು ಸರ್ಕಾರ ರಚಿಸಲಿದ್ದಾರೆ ಎಂದು ಹೇಳಲಾಗಿದೆ.
ಇಂದು ಮಹತ್ವದ ಬೆಳವಣಿಗೆಯಲ್ಲಿ ಚನ್ನೈನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದಿದ್ದು, ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಗಿರೀಶ್ ಜೋಡ್ಕರ್ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆದಲ್ಲಿ ನಾಳೆ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ತಮಿಳುನಾಡಿನಲ್ಲಿ ವಿಜಯ್ ಪ್ರಮಾಣ?



