ಬೆಂಗಳೂರು: ನಿನ್ನೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಪಕ್ಷದ ಶಾಸಕರಿಗೆ ಕ್ಷಮೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಚುನಾವಣಾ ಫಲಿತಾಂಶ ಸಂಬAಧ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಅಡ್ಡಮತದಾನ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದು ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.ಕಳೆದ 8-10 ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ತಮಗೆ ದೂರವಾಣಿ ಕರೆ ಮಾಡಿದ್ದರು ಆ ಸಂದರ್ಭದಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ತಮ್ಮೊಂದಿಗೆ ಮಾತನಾಡಿದ್ದರು. ನೀವಾದರೂ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಇಲ್ಲವಾದರೆ ನಾವು ನಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದಿದ್ದರು. ಎರಡು ಪಕ್ಷದ ಇಬ್ಬರು ಮಾತನಾಡಿಯೇ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
ಅಡ್ಡ ಮತದಾರರಿಗೆ ಕ್ಷಮೆಯಿಲ್ಲ ವಿಜಯೇಂದ್ರ



