ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಣತಂತ್ರ ರೂಪಿಸತೊಡಗಿದ್ದಾರೆ.
ಲೋಕಸಭಾ ಚುನಾವಣಾ ಸಂಬಂಧ ಟಿಕೆಟ್ ಹಂಚಿಕೆ ವೇಳೆ ಯಾವುದೇ ಗೊಂದಲಗಳಾದಂತೆ ಎಚ್ಚರ ವಹಿಸಲು ರಾಜ್ಯದ
28 ಕ್ಷೇತ್ರಗಳಿಗೆ ಖುದ್ದಾಗಿ ತಾವೇ ಭೇಟಿ ನೀಡಿ ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ.
ಮುಂದಿನ ವಾರದಿಂದಲೇ ಕ್ಷೇತ್ರಗಳಿಗೆ ಭೇಟಿ ನೀಡುವ ಕಾರ್ಯಕ್ಕೆ ಮುಂದಾಗಲಿದ್ದಾರೆ.ಈಗಾಗಲೇ ಹಾಲಿ ಸಂಸದರಾಗಿರುವವರಿಗೆ ಮತ್ತೆ ಸ್ಪರ್ಧಿಸಲು ಟಿಕೆಟ್ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಸ್ಥಳೀಯ ಮುಖಂಡರಿಂದ ಸಲಹೆ ಪಡೆಯಲಿದ್ದಾರೆ. ಇನ್ನೊಂದು ಕಡೆ ಸ್ಥಳೀಯ ನಾಯಕರನ್ನು ಗಣನೆಗೆ ತೆಗೆದುಕೊಂಡು ಅವರ ಅಭಿಪ್ರಾಯವನ್ನು ಸಂಗ್ರಹಿಸಬೇಕಾದ ಅನಿವಾರ್ಯತೆಯಿದೆ.
ಡಿಸೆಂಬರ್ ಅಂತ್ಯ, ಜನವರಿ ಮೊದಲ ವಾರದಲ್ಲಿ ಇಡೀ 28 ಕ್ಷೇತ್ರವನ್ನು ಒಂದು ಸುತ್ತು ಹಾಕಿ, ಸ್ಥಳೀಯ ನಾಯಕರುಗಳ ಅಭಿಪ್ರಾಯ ಕಲೆ ಹಾಕಲಿದ್ದು,ಆ ಮೂಲಕ ಸ್ಥಳೀಯ ನಾಯಕತ್ವಕ್ಕೂ ಬೆಲೆ ಕೊಡಿಸಿ, ಇತ್ತ ಅಭ್ಯರ್ಥಿಗಳನ್ನು ಅಂತಿಮ ಮಾಡಿದ್ರೆ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಯಾವುದೇ ಗೊಂದಲವಾಗುವುದಿಲ್ಲ ಎಂಬ ಲೆಕ್ಕಾಚಾರದಲ್ಲಿದ್ದಾರೆ ಎನ್ನಲಾಗಿದೆ.